ನಾತಿಚರಾಮಿ / Naticharami

Author:N Sandhyarani

Pages:120

Edition: 2024

Book Size: 1/8th Demmy

Binding: Paper Back

Publisher: Veeraloka Books PVT .LTD.

Original price was: ₹150.Current price is: ₹135.

In stock

Description

ನಾತಿಚರಾಮಿ / Naticharami – ‘ನಾತಿಚರಾಮಿ’ ಕೃತಿಯು ಎನ್. ಸಂಧ್ಯಾರಾಣಿ ಅವರ ಕಾದಂಬರಿಯಾಗಿದೆ. ಈ ಕೃತಿಯಲ್ಲಿನ ಕೆಲವೊಂದು ಸಾಲುಗಳು ಹೀಗಿವೆ; ಮದುವೆಯ ಪ್ರಮಾಣದಲ್ಲಿ ‘ನಾತಿಚರಾಮಿ’ ನಿನ್ನ ಹೊರತಾಗಿ ಅಲ್ಲ ಎನ್ನುವ ಮಾತು ಧರ್ಮ, ಅರ್ಥ, ಮೋಕ್ಷಗಳ ಜೊತೆಯಲ್ಲಿ ಕಾಮಕ್ಕೂ ಅನ್ವಯವಾಗುತ್ತದೆ. ಈ ಪ್ರಮಾಣವು ಗೌರಿಯ ಪಾಲಿಗೆ ನಂಬಿಕೆ, ಭರವಸೆ ಆಗಬೇಕಿತ್ತು, ಆದರೆ ಅದು ಒಂದು ಅಗೋಚರ ಬಂಧನವೂ ಆಗಿರುತ್ತದೆ. ಆ ಬಂಧನ ಕೇವಲ ಮಾಡಿದ ಆ ಪ್ರಮಾಣದ್ದಲ್ಲ, ಬಾಲ್ಯದಿಂದಲೂ ಸಮಾಜದಿಂದ ಕಲಿಸಲ್ಪಟ್ಟ ಸೋ ಕಾಲ್ಡ್ ಮೌಲ್ಯಗಳದ್ದು, ನಂಬಿಕೆಗಳದ್ದು, ನಿರೀಕ್ಷೆಗಳದ್ದು. ಗಂಡ ಬಿಟ್ಟು ಹೋದಮೇಲೆ ಸಹ ದಾಂಪತ್ಯದ ಈ ಪ್ರಮಾಣವನ್ನು ಕಳಚಿಕೊಳ್ಳುವುದು ಗೌರಿಗೆ ಸಲೀಸಲ್ಲ. ಇದು, ಗೌರಿ ಅವುಗಳನ್ನು ದಾಟುವ ಕಥೆ, ಆ ಮೂಲಕ ಬದುಕಿನ ಸಮೀಕರಣದಲ್ಲಿ ತನ್ನನ್ನು ತಾನು ಪಡೆದುಕೊಳ್ಳುವ ಕಥೆ ಇದಾಗಿದೆ.