ಆವರಣ / Aavarana
Author: S.L. Bhairappa
Pages: 306
Edition: 2025
Book Size: 1/8th Demmy
Binding: Paper Back
Publisher: Sahitya Bhandara
Specification
Description
ಆವರಣ / Aavarana – ಖ್ಯಾತ ಕಾದಂಬರಿಕಾರ ಎಸ್. ಎಲ್. ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ . ಎಂಟನೆಯ ಶತಮಾನದ ಸಂಧಿಕಾಲದ ಅಂತಸ್ಸತ್ತ್ವವನ್ನು ‘ಸಾರ್ಥ’ದಲ್ಲಿ ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ ದಲ್ಲಿ ‘ಸಾರ್ಥ’ ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ ಆವರಣ ‘ವು ಒಳಗೊಳ್ಳುತ್ತದೆ. ಕಾದಂಬರಿಯ ವಸ್ತು ಇತಿಹಾಸ ಮತ್ತು ಇತಿಹಾಸದ ಹೆಸರಿನಲ್ಲಿ ಚಲಾವಣೆಗೆ ಬರುವ ಸುಳ್ಳುಗಳು. ಪೂರ್ಣ ಇಸ್ಲಾಮಿ ಚೌಕಟ್ಟಿನಲ್ಲಿ ರಚಿಸಲ್ಪಟ್ಟಿರುವ ಈ ಕೃತಿಯ ಕಥಾನಾಯಕಿ ರಝಿಯಾ ಉರುಫ್ ಲಕ್ಷ್ಮಿ, ಕಥಾನಾಯಕ ಅವಳ ಶೌಹರ್ ಅಮೀರ, ಚಿತ್ರರಂಗದಲ್ಲಿ ಕೆಲಸ ಮಾಡುವ ದಂಪತಿಗಳು. ಮೂಲ ಹಿಂದೂ ಧರ್ಮದವಳಾದ ಲಕ್ಷ್ಮಿ, ಆಮೀರನಿಗಾಗಿ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ಇಸ್ಲಾಮ್ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ. ಧರ್ಮದಲ್ಲಿ, ಅದರ ಆಚರಣೆಗಳಲ್ಲಿ ನಂಬಿಕೆ ಇಲ್ಲವೆಂದು, ಕೇವಲ ತೋರ್ಪಡಿಕೆಗಾಗಿ ಧರ್ಮ ಬದಲಾವಣೆಯೆಂದು ಅಮೀರ ಹೇಳಿದರೂ ಸಹ, ಕಥೆ ಮುಂದುವರೆದಂತೆ, ತಾನು ತನ್ನ ಧರ್ಮದಲ್ಲಿ ತನಗಿರುವ ವಿಶೇಷ ಅಧಿಕಾರಗಳನ್ನು ಚಲಾಯಿಸುವುದನ್ನು ಕಾಣಬಹುದು. ಇತಿಹಾಸದ ಸತ್ಯವನ್ನು ತಿಳಿಯುವ ಹಾಗು ತಿಳಿಸುವ ಕೆಲಸವನ್ನು ಲೇಖಕರು ಕಥಾನಾಯಕಿಯ ಮೂಲಕ ಮಾಡಿಸುತ್ತಾರೆ. ಕಾದಂಬರಿಯೊಳಗೆ ಮತ್ತೊಂದು ಕಥೆಯನ್ನು ಸೃಷ್ಟಿಸಿ, ಅದರ ಮುಖಾಂತರ ಭಾರತದಲ್ಲಿ ಮುಘಲರ ಆಳ್ವಿಕೆಯ ರೀತಿಯನ್ನು ಹೇಳುತ್ತದೆ. ಕನ್ನಡ ಸಾಹಿತ್ಯದಲ್ಲಿ ವಿವಾದದ ಅಲೆಯನ್ನೇ ಎಬ್ಬಿಸಿದ ಭೈರಪ್ಪನವರ ಕೃತಿಯಾದ ಆವರಣವು ಹಲವಾರು ಹೆಸರಾಂತ ಲೇಖಕರಿಂದ ಟೀಕೆಗೆ ಒಳಗಾದರೂ ಸಹ ಇತಿಹಾಸದ ಸತ್ಯವನ್ನು ತಿಳಿಸುವ ಉದ್ದೇಶದಿಂದ ಹೊರಬಂದ ಕನ್ನಡದ ಅತ್ತ್ಯುತ್ತಮ ರಚನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
