ಕತ್ತಿಯಂಚಿನ ದಾರಿ / Kattianchina Daari

Author: Rahamath Tarikere

Pages:272

Edition: 2011

Book Size: 1/8th Demmy

Binding: Hard Bound

Publisher: Abhinava Prakashana

Original price was: ₹175.Current price is: ₹158.

In stock

Description

ಕತ್ತಿಯಂಚಿನ ದಾರಿ / Kattianchina Daari – ಈ ಕೃತಿಯಲ್ಲಿ ರಹಮತ್ ತರೀಕೆರೆ ಅವರು ಸಮಕಾಲೀನ ಸಮಾಜದ ಬಿಕ್ಕಟ್ಟುಗಳು, ಸಂಸ್ಕೃತಿ ಮತ್ತು ಸಾಹಿತ್ಯದ ಬಗ್ಗೆ ತಮ್ಮ ವೈಚಾರಿಕ ಮತ್ತು ವಿಶ್ಲೇಷಣಾತ್ಮಕ ಚಿಂತನೆಗಳನ್ನು ಮಂಡಿಸಿದ್ದಾರೆ.

“ಇದೊಂದು ಬಿಕ್ಕಟ್ಟಿನ ಕಾಲ; ಚರಿತ್ರೆಯಲ್ಲಿ ಬಿಕ್ಕಟ್ಟಿಲ್ಲದ ಕಾಲವಾದರೂ ಯಾವುದು? ಆದರೆ ನಮ್ಮ ನಾಡಿನ ಚರಿತ್ರೆಯಲ್ಲಿ ಯಾವತ್ತೂ ಇಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿರಲಿಲ್ಲ. ಜಗತ್ತಿನ ದೊಡ್ಡ ಮಿಲಿಟರಿ ಶಕ್ತಿಗಳು, ಕೋಮುವಾದ, ಪ್ರಭುತ್ವಗಳು ಹುಟ್ಟಿಸಿರುವ ಕ್ರೌರ್ಯ, ಅದಕ್ಕೆ ಎದುರಾಗಿ ಹುಟ್ಟಿಕೊಂಡ ಜನರ ಪ್ರತಿರೋಧಗಳು, ಮಧ್ಯಮವರ್ಗದ ಅವಕಾಶವಾದಿ ವರ್ತನೆ, ಜನರಿಗಾಗಿ ಕೆಲಸ ಮಾಡುವ ಚಳುವಳಿಗಾರರ ದಮನ – ಇವೆಲ್ಲವೂ ನಮ್ಮ ಓದು ಮತ್ತು ಬರೆಹದ ಮೇಲೆ ಹೇಗೋ ಆವರಿಸಿಕೊಂಡಿವೆ. ಇವನ್ನು ಮರೆತು ಬರೆಯುವಂತಿಲ್ಲ; ಮರೆಯದೆ ಬರೆದರೆ, ಬರೆದ ಬರೆಹವು ಆತ್ಮವಿಶ್ವಾಸ ಕೊಡುವುದಕ್ಕೆ ಬದಲಾಗಿ ಪ್ರಶ್ನೆಯಾಗಿ ಎದುರು ನಿಂತು ಕಾಡುತ್ತದೆ. ಇದನ್ನೆ ಕತ್ತಿಯಂಚಿನ ಹಾದಿಯಲ್ಲಿ ನಡೆವ ಕಷ್ಟ ಎಂದು ನಾನು ಭಾವಿಸಿದ್ದೇನೆ. ಕತ್ತಿಯಲುಗಿನ ಮೇಲೆ ನಡೆದರೆ ಕಾಲು ಕತ್ತರಿಸಿ ಹೋಗುತ್ತದೆ; ಬಾಗಿ ಎತ್ತಿಕೊಂಡರೆ ಕೈಯ ಆಯುಧವಾಗುತ್ತದೆ; ಸ್ವವಿಮರ್ಶೆಯನ್ನಾಗಿ ಮಾಡಿ ಚುಚ್ಚಿಕೊಂಡರೆ, ಒಡಲಲ್ಲಿ ಮುರಿದು ನೋವುಂಟು ಮಾಡುತ್ತದೆ’ ಎಂದು ರಹಮತ್ ತರೀಕೆರೆ ಮುನ್ನುಡಿಯಲ್ಲಿ ಹೇಳಿದ್ದಾರೆ.