ರೇಶ್ಮೆ ಬಟ್ಟೆ / Reshme Batte
Author: Vasudhendra
Pages:472
Edition: 2024
Book Size: 1/8th Demmy
Binding: Paper Back
Publisher: Chanda Pustaka
Description
ರೇಶ್ಮೆ ಬಟ್ಟೆ / Reshme Batte – ‘ಜಾಗತೀಕರಣ’ ಎನ್ನುವ ಸಂಗತಿಯನ್ನು ನಾವು ಇತ್ತೀಚಿನ ದಶಕಗಳಲ್ಲಿ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಾರ ವ್ಯವಹಾರಗಳಿಗೆ ಸೀಮಿತವಾಗಿ ಬಳಸುತ್ತೇವೆ. ಆದರೆ ದೇಶ-ದೇಶಗಳ ನಡುವೆ ವ್ಯಾಪಾರವು ಯಾವುದೋ ರೂಪದಲ್ಲಿ ಪ್ರಾರಂಭವಾದರೆ ಸಾಕು, ‘ಜಾಗತೀಕರಣ’ವು ಸದ್ದಿಲ್ಲದೆ ನಡೆದಿರುತ್ತದೆ. ಈ ಪ್ರಕ್ರಿಯೆಯನ್ನು ಎಲ್ಲಾ ಕಾಲದಲ್ಲಿಯೂ ಜಗತ್ತು ಹಲವು ರೂಪಗಳಲ್ಲಿ ಕಂಡಿದೆ. ಸಿಹಿ-ಕಹಿಗಳೆರಡನ್ನೂ ಒಟ್ಟಿಗೆ ತಂದೊಡ್ಡುವ ಜಾಗತೀಕರಣವು ಆ ದೇಶ-ಕಾಲದ ಜನಸಾಮಾನ್ಯರ ಬದುಕಿನಲ್ಲಿ ಹಲವು ಗಡಿಗಳನ್ನು ದಾಟುವ ಸವಾಲನ್ನು ಜೀವನ್ಮರಣದ ಸಂಗತಿಯಾಗಿ ಮುಂದಿಡುತ್ತದೆ. ಬದುಕಿನಲ್ಲಿ ಬದಲಾವಣೆಯನ್ನು ಕಡ್ಡಾಯವಾಗಿ ಬೇಡುವ ಈ ವಿದ್ಯಮಾನವು, ತಲೆಮಾರುಗಳ ನಡುವೆ ದೊಡ್ಡ ಕಂದಕವನ್ನು ನಿರ್ಮಿಸುತ್ತದೆ. ಧರ್ಮ, ಸಂಸ್ಕೃತಿ, ಭಾಷೆ, ವಾಣಿಜ್ಯ, ರಾಜಕೀಯ, ನೈತಿಕತೆ – ಎಲ್ಲದರಲ್ಲಿಯೂ ಊಹಿಸಲಾರದ ಸಂಕರವನ್ನು ಸೃಷ್ಟಿಸಿ ಯುಗಸಂಘರ್ಷವನ್ನು ಸೃಷ್ಟಿಸುತ್ತದೆ. ಈ ಕಾದಂಬರಿಯು ಎರಡನೆಯ ಶತಮಾನದ ಏಷ್ಯಾಖಂಡದ ಹಲವು ಚಾರಿತ್ರಿಕ ಸಂಗತಿಗಳನ್ನು ಇಟ್ಟುಕೊಂಡು, ಅಂದಿನ ಯುಗಸಂಘರ್ಷವು ಜನಸಾಮಾನ್ಯರಲ್ಲಿ ತಂದಿರಬಹುದಾದ ಸವಾಲುಗಳನ್ನು ಕಾಲ್ಪನಿಕವಾದ ಕತೆಯ ಮೂಲಕ ನಿಮ್ಮ ಮುಂದಿಡಲು ಪ್ರಯತ್ನಿಸುತ್ತದೆ. ಹಲವು ದೇಶಗಳ ಮತ್ತು ಹಲವು ಧರ್ಮಗಳ ವಿಸ್ತಾರವಾದ ಅಧ್ಯಯನ ಮಾಡಿ ಈ ಕೃತಿಯನ್ನು ಲೇಖಕರು ರಚಿಸಿದ್ದಾರೆ.
