ಹಲೋ / Hello
Author: Ravi Belagere
Pages:184
Edition: 2023
Book Size: 1/8th Demmy
Binding: Paper Back
Publisher: Bhavana Prakashana
Specification
Description
ಹಲೋ / Hello – ರವಿ ಬೆಳಗೆರೆ! ಅವರು ಕನ್ನಡಿಗರ ಮನೆಮಾತು, ಅತ್ಯಂತ ಹೆಚ್ಚು ಬರೆದ, ಓದಿಸಿಕೊಳ್ಳುವ ಲೇಖಕ, ಪತ್ರಕರ್ತ, ಕಾದಂಬರಿಕಾರ, ಅನುವಾದಕ, ಅವರ ಒಂದು ಹೊಸ ಪುಸ್ತಕ ಬಿಡುಗಡೆಯಾಗುತ್ತದೆ ಅಂದರೆ ಸಾವಿರಾರು ಓದುಗರು ಕರ್ನಾಟಕದಾದ್ಯಂತ ಅದಕ್ಕಾಗಿ ಕಾಯುತ್ತಿದ್ದರು. ಅವರು ಒಂದು ವಿಷಯ, ಒಂದು ಸಂಗತಿ ಅಥವಾ ಒಂದು ಸಬ್ಜೆಕ್ಟ್ ಇಟ್ಟುಕೊಂಡು ಬರೆದವರಲ್ಲ. ಮನುಷ್ಯ ಸಂಬಂಧಗಳು ಅವರ ಆಸಕ್ತಿಯ ಪ್ರಥಮ ವಿಷಯ. ಆದರೆ ಅವರು ಅತ್ಯಂತ ಆಸಕ್ತಿಯಿಂದ ದೇಶ, ಇತಿಹಾಸ, ಯುದ್ಧಗಳ ಬಗ್ಗೆ ಬರೆದಿದ್ದಾರೆ. ಯುದ್ಧಗಳ ಪ್ರತ್ಯಕ್ಷ ವರದಿ ಮಾಡಿದ್ದಾರೆ. ಕಾರ್ಗಿಲ್ ಕದನ ಭೂಮಿ, ಅಫಘನಿಸ್ತಾನ ಮತ್ತು ಪುಲ್ವಾಮಾದ ಮಹಾ ಯುದ್ಧರಂಗದಲ್ಲಿ ಓಡಾಡಿದ್ದಾರೆ. ಅಂತೆಯೇ ಅವರ ಕಾದಂಬರಿಗಳಲ್ಲಿ ಪ್ರೀತಿ, ತಂತ್ರ, ಅಂಡರ್ ವರ್ಲ್ಡ್ ರಾಜಕಾರಣ, ಕಾಮ, ಟೆರರಿಸಂ ವಿಜೃಂಭಿಸಿವೆ. ಅವರ ತನಿಖಾ ವರದಿ ಪುಸ್ತಕವಾಗಿದೆ. ಮೂಲತಃ ರವಿ ಬೆಳಗೆರೆ ಕಥೆಗಾರರೆಂದೇ ಹೆಸರಾದವರು. ಅವರು ತಮ್ಮ ಇಷ್ಟದ ಕವಿ ಸಾಹಿರ್ ಲೂಧಿಯಾನವಿಯಿಂದ ಹಿಡಿದು ತೆಲುಗು ಲೇಖಕ ಗುಡಿಪಾಟು ವೆಂಕಟ ಚಲಂ ತನಕ ಅನೇಕರ ಜೀವನ ಕಥನ ಬರೆದಿದ್ದಾರೆ. ಅನುವಾದಿಸಿದ್ದಾರೆ. ರವಿ ಬೆಳಗೆರೆ ಪ್ರತೀವಾರ ಬರೆಯುವ ‘ಹಲೋ’ ಅಂಕಣ ಹಾಯ್ ಬೆಂಗಳೂರ್!’ ಪತ್ರಿಕೆಯ ಜೀವಾಳವಾಗಿತ್ತು. ಅನೇಕ ರಾಜಕಾರಣಿಗಳ ಬದುಕಿನ ಆಗು-ಹೋಗುಗಳನ್ನು ತೆರೆದಿಡುತ್ತಾ ಹೋಗುವ ಈ ಅಂಕಣ ರಾಜಕಾರಣಿಗಳಿಗೆ ಬದುಕಿನ ಪಾಠವಾಗಿತ್ತು. ಈಗ ಈ ಅಂಕಣ ಪುಸ್ತಕ ರೂಪದಲ್ಲಿ ಪ್ರಕಟವಾಗುತ್ತಿದೆ. ಎಂದಿನಂತೆ ಒಪ್ಪಿಕೊಳ್ಳಿ.
